




ಬಂದಾರು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ. 30ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಬಂದಾರು ಅವರು ಸನ್ಮಾನಿಸಿದರು. ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಗೌಡ ಎಂ.ಯು.ಮತ್ತು ಎಸ್.ಡಿ.ಎಮ್.ಸಿ ಅಧ್ಯಕ್ಷ ಉಮೇಶ ಪೊಯ್ಯೊಲೆ, ಅಬ್ಬಾಸ್ ಬಟ್ಲಡ್ಕ ಶಶಿಧರ್ ಮತ್ತು ಎಸ್.ಡಿ.ಎಂ.ಸಿ. ಸದಸ್ಯರು ಭಾಗವಹಿಸಿದ್ದರು









