


ಬೆಳ್ತಂಗಡಿ: ತಾಲೂಕು ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಮಾಸಿಕ ಸಭೆಯು ಸಲಹಾ ಸಮಿತಿ ಅಧ್ಯಕ್ಷ ಹಾಗೂ ಗ್ರಾ.ಪಂ. ಅಧ್ಯಕ್ಷ ದಿವಾಕರ.ಎಂ ಅವರ ಅಧ್ಯಕ್ಷತೆಯಲ್ಲಿ ನ.5ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಗ್ರಂಥಾಲಯದಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳ ಬಗ್ಗೆ ಹಾಗೂ ಅರಿವು ಕೇಂದ್ರಕ್ಕೆ ಪುಸ್ತಕಗಳು ಮತ್ತು ವಿಕಲಚೇತನ ಮಕ್ಕಳಿಗೆ ಅನುಕೂಲವಾಗುವ ಅನೇಕ ಸಲಕರಣೆಗಳು ಬಂದಿರುವ ಬಗ್ಗೆ ತಿಳಿಸಲಾಯಿತು.


ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ದಿವಾಕರ ಆಚಾರ್ಯ ಗೇರುಕಟ್ಟೆ, ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಈಶ್ವರಿ, ಕೇಶವ ಪೂಜಾರಿ ನಾಳ, ಶರತ್ ಕುಮಾರ್, ಭುವನೇಶ್ ಗೇರುಕಟ್ಟೆ,ದೇವಕಿ ಮರ್ತೊಟ್ಟು, ಮಮತಾ ಎಂ., ಪ್ರಜ್ಞಾ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಾದ ರಚನ್, ಅನನ್ಯ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಾದ ಶ್ರಾವ್ಯ, ಸುಮಂತ್ ಭಾಗವಹಿಸಿದ್ದರು.
ಸಲಹಾ ಸಮಿತಿಯ ಕಾರ್ಯ ದರ್ಶಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ. ಕೆ ಗತಸಭೆಯ ಅನುಪಾಲನ ವರದಿಯನ್ನು ಮಂಡಿಸಿದರು. ಗ್ರಂಥಾಲಯಕ್ಕೆ ಪ್ರತ್ಯೇಕ ಕಟ್ಟಡ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಲಾಯಿತು. ಅರಿವು ಕೇಂದ್ರದ ಮೇಲ್ವಿಚಾರಕಿ ಪ್ರಮೀಳಾ ಕೆ. ಹಾಗೂ ಪಂಚಾಯತ್ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.









