




ಗರ್ಡಾಡಿ: ಗ್ರಾಮದ ಮಿತ್ತೊಟ್ಟು -ಪಾರ ರಸ್ತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ 10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಶಕ್ತಿ ಕೇಂದ್ರ ಪ್ರಮುಖರಾದ ದಿನಕರ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ದಿನೇಶ್ ಪೂಜಾರಿ, ಶ್ಯಾಮ್ ಸುಂದರ್ ಭಟ್, ಪಡoಗಡಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ, ಪಂಚಾಯತ್ ಸದಸ್ಯರಾದ ಅಶೋಕ್ ಸಫಲ್ಯ, ಸುಮತಿ, ಕಾರ್ಯಕರ್ತರಾದ ನಿತೇಶ್ ಪೂಜಾರಿ ಹಾಗೂ ಕಾರ್ಯಕರ್ತರು ಕಾಮಗಾರಿ ವೀಕ್ಷಣೆ ಮಾಡಿದರು.









