ಹರಿಯಾಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಎಸ್.ಡಿ.ಎಂ ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ

0

ಉಜಿರೆ: ಹರಿಯಾಣದ ಕುರುಕ್ಷೇತ್ರ ವಿಶ್ವವಿದ್ಯಾನಿಲಯದಲ್ಲಿ ನ. 11ರಿಂದ 17ರವರೆಗೆ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸುತ್ತಿರುವ ಒಂದು ವಾರದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ವಿವಿಧ ರಾಜ್ಯಗಳ ರಾಷ್ಟ್ರೀಯ ಸೇವಾ ಯೋಜನಾ ತಂಡಗಳು ಭಾಗವಹಿಸುತ್ತಿದ್ದು, ಕರ್ನಾಟಕದಿಂದ ಒಟ್ಟು ಎಂಟು ರಾಷ್ಟ್ರೀಯ ಸೇವಾ ಯೋಜನಾ ಸ್ವಯಂ ಸೇವಕರು ಮತ್ತು ಒಬ್ಬರು ಯೋಜನಾಧಿಕಾರಿಗಳಿಗೆ ಭಾಗವಹಿಸುವ ಅವಕಾಶ ದೊರೆತಿದೆ.

ಕರ್ನಾಟಕ ತಂಡವನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಮಹೇಶ್ ಶೆಟ್ಟಿ ಅವರು ಮುನ್ನಡೆಸುತ್ತಿದ್ದಾರೆ. ಸ್ವಯಂಸೇವಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೆವಿಲ್ ನವೀನ್ ಮೊರಸ್, ಕೆನರಾ ಕಾಲೇಜು ಮಂಗಳೂರಿನ ಯುವರಾಜ್, ಗೋವಿಂದ ದಾಸ್ ಕಾಲೇಜು ಸುರತ್ಕಲ್ ನ ಪಲ್ಲವಿ, ಕುಂದಾಪುರದ ಬಿ.ಬಿ.ಹೆಗ್ಡೆ ಕಾಲೇಜಿನ ಶರಣ್ಯಾ ಶೆಟ್ಟಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ದೇವಿಕಾ, ವಿಜಯಾ ಕಾಲೇಜು ಮಲ್ಕಿಯ ದೀಪ್ತಿ, ಉಡುಪಿ ತೆಂಕನೆಡಿಯೂರು ಕಾಲೇಜಿನ ಬಿರಾದರ್, ಕಾರ್ಕಳ ಭುವನೇಂದ್ರ ಕಾಲೇಜಿನ ಗಣೇಶ್ ಇವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

ಅವರಿಗೆ ಎಸ್.ಡಿ.ಎಂ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿ ಡಾ. ಶೇಷಪ್ಪ ಕೆ. ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here