ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

0

ಬೆಳ್ತಂಗಡಿ: ವಿದ್ಯಾರ್ಥಿಗಳು ಅಂಕಗಳಿಸುವುದರೊಂದಿಗೆ ಪ್ರತಿಭಾನ್ವಿತರೂ ಆಗಿದ್ದಾಗ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಾಧಕರನ್ನು ಅಭಿನಂದಿಸುವ ‘ಅಭಿನಂದನಂ’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಆತ್ಮವಿಶ್ವಾಸ ಮತ್ತು ನಾಯಕತ್ವವನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಪಾಲ್ಗೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ., ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು. ಉಪನ್ಯಾಸಕ ಶಂಕರ್ ರಾವ್ ಸ್ವಾಗತಿಸಿದರು. ಸುಧೀರ್ ಕೆ.ಎನ್. ನಿರೂಪಿಸಿದರು. ಹರ್ಷಿತ್ ಕುಮಾರ್ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here