ಮಡಂತ್ಯಾರು: ಪ್ರಾ.ಕೃ.ಪ. ಸ. ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ

0

ಮಡಂತ್ಯಾರು: ಡಾ‌. ಎಂ.ಎನ್ ಮಾರ್ಗದರ್ಶನದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಗೂ ಇತರ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಬೆಳ್ತಂಗಡಿ ತಾಲೂಕು ಅವರ ನೇತೃತ್ವದಲ್ಲಿ ದ. ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ 2025 ಉದ್ಘಾಟನಾ ಸಮಾರಂಭ ನ. 14ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು.

ಸಹಕಾರಿ ಧ್ವಜಾರೋಹಣವನ್ನು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಜೋಯಲ್ ಮೆಂಡೋನ್ಸಾ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಗಿಡ ನೆಡುವ ಕಾರ್ಯಕ್ರಮ ನೇರವೇರಿಸಿದರು. ಸಹಕಾರಿ ಜಾಥಾ ಉದ್ಘಾಟನೆಯನ್ನು ಧರ್ಮಸ್ಥಳ ಕೃಷಿ ಪ್ರಾದೇಶಿಕ ನಿರ್ದೇಶಕ ಜಾಯ್ ಅಬ್ರಾಹಂ ಮಾಡಿದರು. ಪುರಾತನ ಕೃಷಿ ಸಾಮಾಗ್ರಿ ವಸ್ತುಗಳ ಪ್ರದರ್ಶನ ಉದ್ಘಾಟನೆ ಹಾಗೂ ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು. ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಶಶಿಕುಮಾರ್‌ ರೈ ಬಾಲ್ಯೊಟ್ಟು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಪ್ರಭಾಕರ ಆರಂಬೋಡಿ, ಸಹಕಾರ ಸಂಘಗಳ ಉಪ ನಿಬಂಧಕ ಎನ್. ರಮೇಶ್, ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್‌.ಎಂ. ರಘು, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಸೇಕ್ರೆಡ್ ಹಾರ್ಟ್ ಚರ್ಚ್ ನ ಧರ್ಮಗುರು ಫಾ‌.ಡಾ.ಸ್ಯಾನ್ ಗೋವಿಯಸ್ ಹಾಗೂ ತಾಲೂಕಿನ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.

ಸಿಬ್ಬಂದಿ ಪೂರ್ಣಿಮ ಪ್ರಾರ್ಥನೆ ಮಾಡಿದರು. ಸಂಘದ ಅಧ್ಯಕ್ಷ ಜೋಯಲ್ ಮೆಂಡೋನ್ಸಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕ ಧರಣೇಂದ್ರ ಜೈನ್ ಹಾಗೂ ಫ್ರಾನ್ಸಿಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here