


ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 14ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಅವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕ ದಿವಾಕರ ಗೌಡ ಮುಚ್ಚಾರು ಅವರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಮಕ್ಕಳ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ದಿವಾಕರ ಗೌಡ ಮುಚ್ಚಾರು ಅವರು ಮಕ್ಕಳ ದಿನಾಚರಣೆ ಎಂದರೆ ಮಕ್ಕಳಿಗೆ ಒಂದು ಸಂತೋಷದ ದಿನ ಈ ದಿನವನ್ನು ಎಲ್ಲಾ ವಿದ್ಯಾರ್ಥಿಗಳು ಸಂತೋಷದಿಂದ ಕಳೆಯಬೇಕು ಎಂದು ಅಭಿಪ್ರಾಯಪಟ್ಟರು. ನಂತರ ಮಾತನಾಡಿದ ಶಾಲಾ ಶಿಕ್ಷಕ ಗೌರೀಶ್ ಅವರು ಮಕ್ಕಳ ದಿನಾಚರಣೆಯ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಶಾಲಾ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆಯ ಭಾಷಣವನ್ನು ಏರ್ಪಡಿಸಲಾಗಿತ್ತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಆಯೋಜಿಸಲಾಗಿದ್ದ ಗೂಡು ದೀಪ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದಲ್ಲಿ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಪುಷ್ಪಲತಾ ಅವರು ನೆರವೇರಿಸಿಕೊಟ್ಟರು. ಶಾಲೆಯ ಎಲ್ಲ ಮಕ್ಕಳಿಗೆ SDM ಶಿಕ್ಷಣ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಅವರು ಸ್ವಾಗತಿಸಿದರು. ಶಾಲಾ ಶಿಕ್ಷಕಿ ಶೀಲಾ ಎನ್. ಅವರು ನಿರೂಪಿಸಿದರು. ಜಿತಿಕ್ಷ ಅವರು ಧನ್ಯವಾದಗೈದರು.









