ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

0

ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ಒಟ್ಟು ಸೇರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಚಿಣ್ಣರ ಕಲರವ- ಕ್ರೀಡಾಸಂಗಮ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಬಹು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜೆರೋಮ್ ಡಿಸೋಜಾ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಅಂತರರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ, ವಿಲೋನ ಡಿಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾoದ, ಕಾರ್ಯದರ್ಶಿ ಎವಿಜಿನ್ ರೋಡ್ರಿಗಸ್ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಸಂತ ಅಂತೋನಿ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಸಲ್ದಾನ, ನಾರಾವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ತುಳುಪುಳೆ, ಸಂತ ಪಾವಲರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಿಚರ್ಡ್ ಮೊರಸ್, ಸಂತ ಪಾವಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸೋಫಿಯಾ ಪೆರ್ನಾಂಡಿಸ್, ಪದವಿ ಕಾಲೇಜಿನ ಉಪನ್ಯಾಸಕ ಸ್ವಾಮಿ ರೂಪೇಶ್ ತಾವ್ರೊ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಎಲ್.ಕೆ.ಜಿ ಯಿಂದ ಪದವಿ ತರಗತಿಯವರೆಗೆ ಎಲ್ಲಾ ಮಕ್ಕಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಹಾಗೂ ತ್ರೋಬಾಲ್ ಪಂದ್ಯಗಳು ಎಲ್ಲರ ಮನಸೂರೆಗೊಂಡವು. ಶಾಲಾ ಮೈದಾನದಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ಮಿತದರದಲ್ಲಿ ಆಹಾರ ಮೇಳವನ್ನು ಏರ್ಪಡಿಸಲಾಗಿತ್ತು. ಶ್ರೀ ಗೋಪಾಲಕೃಷ್ಣ ತುಳುಪುಳೆ ಎಲ್ಲರನ್ನು ಸ್ವಾಗತಿಸಿದರು. ಶಿಕ್ಷಕಿ ರೆನಿಟಾ ಟೀಚರ್ ಕಾರ್ಯಕ್ರಮ ನಿರೂಪಿಸಿದರು. ರಿಚರ್ಡ್ ಮೊರಸ್ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here