ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಪೋಷಕರ ಮಹಾಸಭೆ

0

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮತ್ತು ಹೆತ್ತವರ/ಪೋಷಕರ ಮಹಾಸಭೆ ನ. 14ರoದು ಜರುಗಿತು. ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಅಮೀನಾ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕಿ ರಾಯಿಶ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ, ಉಪಾಧ್ಯಕ್ಷೆ ಲಾವಣ್ಯ ಎಸ್. ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಉಮೇಶ್ ಕುಮಾರ್ ಮದ್ದಡ್ಕ, ದಾನಿಗಳಾದ ಸಾಜಿದ್ ಮದ್ದಡ್ಕ, ಆಶಾ ಕಾರ್ಯಕರ್ತೆ ಜಯಂತಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಶಾಲಾ ಎಸ್‌.ಡಿ.ಎಂ.ಸಿ ಸದಸ್ಯರು, ಅಧ್ಯಾಪಕ ವೃಂದ, ಅಡುಗೆ ಸಿಬ್ಬಂದಿಯವರು, ಹೆತ್ತವರು/ಪೋಷಕರು ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಏಕ ಪೋಷಕ ಸದಸ್ಯರಿರುವ 12 ಮಂದಿ ವಿದ್ಯಾರ್ಥಿಗಳಿಗೆ ಕೊಡುಗೈದಾನಿ ಸಾಜಿದ್ ಮದ್ದಡ್ಕ ನಗದು ನೀಡಿ ಪ್ರೋತ್ಸಾಹಿಸಿದರು. ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಾಥ್ ಬoಗೇರ ಅವರು ಬಹುಮಾನದ ಮೊತ್ತವನ್ನು ನೀಡಿ ಸಹಕರಿಸಿದರು.

ಈ ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳ ಮುoದಾಳತ್ವದಲ್ಲಿ ನಡೆಯಿತು. ತಂದೆ ನoತರ ಎಸ್. ಡಿ. ಎಂ. ಸಿ ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ಹೆತ್ತವರ/ಪೋಷಕರ, ಶಿಕ್ಷಕರ ಮಹಾಸಭೆ ಜರುಗಿತು. ಶಾಲಾ ಅಭಿವೃದ್ಧಿ ಮಕ್ಕಳ ರಕ್ಷಣೆ ನಮ್ಮ ಶಾಲೆ ನಮ್ಮ ಜವಾಬ್ದಾರಿ ಹಾಗೂ ಶಾಲಾ ವಾರ್ಷಿಕೋತ್ಸವದ ಬಗ್ಗೆ ವಿಚಾರ ವಿನಿಮಯ ನಡೆಯಿತು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಅವರು ಪ್ರಾಸ್ತಾವಿಕ ಮಾತನಾಡಿದರು. (ವರದಿ ಮನು ಮದ್ದಡ್ಕ,)

LEAVE A REPLY

Please enter your comment!
Please enter your name here