




ಕನ್ಯಾಡಿ: ಶ್ರೀ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಅವರು ನ. 17ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ .ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಹೆಗ್ಗಡೆಯವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ, ಸುಖ, ಶಾಂತಿ ನೆಲೆಸಲಿ, ಲೋಕ ಕಲ್ಯಾಣವಾಗಲಿ ಎಂದು ಶುಭಹಾರೈಸಿದರು.








