




ಬೆಳ್ತಂಗಡಿ: ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿರುವಂತಹ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಯೋಜಿಸಿರುವ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರಿಷಿಕ 9ನೇ ತರಗತಿ ಶ್ಲೋಕ ಕಂಠ ಪಾಠದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾಳೆ. ಹಾಗೆಯೇ ಪ್ರಾಥಮಿಕ ವಿಭಾಗದಲ್ಲಿ ಶ್ಲೋಕ ಕಂಠ ಪಾಠದಲ್ಲಿ ಸಾನಿಧ್ಯ ಆರನೇ ತರಗತಿ, ತೃತೀಯ ಸ್ಥಾನ ಪಡೆದುಕೊಂಡಿರುತ್ತಾಳೆ. ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ಸೇವಾ ಸಮಿತಿಯ ಸರ್ವರು ಹಾಗೂ ಶಿಕ್ಷಕ ವೃಂದದವರು ಶುಭಾಶಯ ಕೋರಿರುತ್ತಾರೆ.









