





ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನಡೆಸಿದ ನೈತಿಕ ಮೌಲ್ಯ ಆಧಾರಿತ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆದ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಧರ್ಮಸ್ಥಳ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಅಮಿತ್ ಪ್ರೌಢಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಏಳನೇ ತರಗತಿಯ ಆರಾಧ್ಯ ಪಿ. ಜೋಶಿ ಪ್ರಾಥಮಿಕ ಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.









