




ನಾವೂರು: ಗ್ರಾಮದ ಪರಾರಿ ನಿವಾಸಿ ಕಾಂತಪ್ಪ ಮೂಲ್ಯರವರ ಪತ್ನಿ ಹರಿಣಾಕ್ಷಿರವರು ಅನಾರೋಗ್ಯದಿಂದ ಬಳಲುತ್ತಿದ್ದು, ನ.22ರಂದು ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೋರ್ತಾಜೆ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಗೌಡ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಸವಣಾಲು, ಗ್ರಾಮ ಪಂಚಾಯತ್ ನಾವೂರು ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತಾ, ಸದಸ್ಯೆ ವೇದಾವತಿ, ಶಕ್ತಿಕೇಂದ್ರ ಅಧ್ಯಕ್ಷ ಪ್ರದೀಪ್ ಉಪಸ್ಥಿತರಿದ್ದರು.









