




ಬೆಳ್ತಂಗಡಿ: ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯ ಎಸ್. ಡಿ. ಎಂ. ಸಿ ಹಾಗೂ ಶಿಕ್ಷಕರ ಬೇಡಿಕೆಯಂತೆ ಶಾಲಾ ಕಟ್ಟಡ ದುರಸ್ತಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದಿಂದ ರೂಪಾಯಿ ಒಂದು ಲಕ್ಷ ಅನುದಾನವನ್ನು ಯೋಜನೆಯ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದ್ದಾರೆ.


ತಮ್ಮ ಜನ್ಮದಿನದ ಸಂದರ್ಭದಲ್ಲಿ 2025 -26ನೇ ಸಾಲಿನ ಜ್ಞಾನದೀಪ ಕಾರ್ಯಕ್ರಮದಲ್ಲಿ ಈ ಅನುದಾನವನ್ನು ಒದಗಿಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆಯವರಿಗೆ ಗೇರುಕಟ್ಟೆ ಪ್ರೌಢಶಾಲೆಯ ಎಸ್. ಡಿ. ಎಂ. ಸಿ ಕಾರ್ಯಾಧ್ಯಕ್ಷರು, ಸದಸ್ಯರು ಮತ್ತು ಶಿಕ್ಷಕ ವೃಂದವು ಕೃತಜ್ಞತೆಗಳನ್ನು ಅರ್ಪಿಸುತ್ತದೆಯೆಂದು ಸಂಸ್ಥೆಯ ಮುಖ್ಯಸ್ಥೆ ಈಶ್ವರಿ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








