ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

0

ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯಲ್ಲಿ ತಾಂತ್ರಿಕ ಹಾಗೂ ಇತರ ಸಮಸ್ಯೆಗಳು ಬರುತ್ತಿದ್ದು ಕಳೆದ ಅ.30ರಂದು ವಿದ್ಯಾರ್ಥಿವೇತನ ಅರ್ಜಿಯನ್ನು ಕೊನೆಯ ದಿನಾಂಕ ಎಂದು ಮಂಡಳಿಯು ಘೋಷಿಸಿತ್ತು. ಈ ವಿಚಾರವನ್ನು ಭಾರತೀಯ ಮಜ್ದೂರ್ ಸಂಘದ ಕಟ್ಟಡ ಕಾರ್ಮಿಕ ವಿಭಾಗವು ಕಾರ್ಮಿಕ ಸಚಿವರಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಈ ತಾಂತ್ರಿಕ ಸಮಸ್ಯೆಗಳು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ವಿದ್ಯಾರ್ಥಿ ವೇತನದ ಅರ್ಜಿಯನ್ನು ಕಾಲಾವಕಾಶ ವಿಸ್ತರಿಸುವಂತೆ ವಿನಂತಿಸಲಾಗಿತ್ತು.

ಇದಕ್ಕೆ ಪೂರಕವಾಗಿ ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಈ ಬಗ್ಗೆ ಕಾರ್ಮಿಕ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸುವಂತೆ ಆಗ್ರಹಿಸಿದ್ದರು. ಇದೀಗ ಡಿ.30ರವರೆಗೆ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸಿರುತ್ತಾರೆ. ಈ ಪ್ರಯೋಜನವನ್ನು ಕಾರ್ಮಿಕರು ಪಡೆದುಕೊಳ್ಳುವಂತೆ ಬಿ.ಎಂ.ಎಸ್ ನ ರಾಜ್ಯ ಕಾರ್ಯದರ್ಶಿ ಎ.ಜೈರಾಜ್ ಸಾಲಿಯಾನ್ ಕಾನರ್ಪ ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here