




ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಡಿ. 2ರಂದು ಅನುಗ್ರಹ ಸಭಾ ಭವನದಲ್ಲಿ ಜರಗಿತು. ಶಾಲಾ ಸಂಚಾಲಕ ಫಾ.ಅಬೆಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ನಿಡ್ಲೆ ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ರಾವ್ ಮುಖ್ಯ ಅತಿಥಿಯಾಗಿದ್ದರು. ಹಳೆ ವಿದ್ಯಾರ್ಥಿಗಳ ಸಂಘ ಅಧ್ಯಕ್ಷೆ ಪ್ರೀತಿತ ಬಂಗೇರ, ಚರ್ಚ್ ಪಾಲನ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್,
ಪಿ.ಟಿ.ಎ ಉಪಾಧ್ಯಕ್ಷ ಗುರುರಾಜ ಶಬರಾಯ ಉಪಸ್ಥಿತರಿದ್ದರು.



ಪ್ರಾಂಶುಪಾಲ ಫಾ. ವಿಜಯ್ ಲೋಬೊ ವಾರ್ಷಿಕ ವರದಿ ವಾಚಿಸಿದರು. ಮುಖ್ಯ ಅತಿಥಿ ಮತ್ತು ಅವಿನಾಶ್ ರಾವ್, ಪ್ರೀತಿತ ಬಂಗೇರ, ಅಂಟೋನಿ ಫೆರ್ನಾಂಡಿಸ್, ಕಳೆದ ಎಸ್. ಎಸ್. ಎಲ್. ಸಿ. ಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಾರನ್ ಡಿಸೋಜ ಹಾಗೂ ಎಲ್ಲ ತರಗತಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ತಾಲೂಕು, ಜಿಲ್ಲಾ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.


ಪೋಷಕರಿಗೆ ನಡೆಸಿದ ಕ್ರೀಡಾ ಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಮಿಶೇಲ್ ಪಿಂಟೊ ಸ್ವಾಗತಿಸಿದರು. ವಿದ್ಯಾರ್ಥಿ ನಿರಾಜ್ ಕಾರ್ಯಕ್ರಮ ನಿರೂಪಿಸಿದರು. ಹೆಝಲ್ ಜಿಶಾ ಪಿಂಟೊ ವಂದಿಸಿದರು.









