






ಕಳೆಂಜ: ಕಾಯರ್ತಡ್ಕದ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿನಿ ನಮಸ್ವಿ ಎಸ್. ಶೆಟ್ಟಿಗಾರ್ ಅವರು ಬೆಳ್ತಂಗಡಿ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಶಾಲಾ ಮುಖ್ಯ ಶಿಕ್ಷಕಿ, ಸಹ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಪರವಾಗಿ ಅಭಿನಂದನೆ ಹಾಗೂ ಮುಂಬರುವ ಜಿಲ್ಲಾಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.









