ಡಿ.7(ನಾಳೆ)ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ 12ನೇ ವರ್ಷದ ಕೋಟಿ-ಚೆನ್ನಯ ಕ್ರೀಡಾಕೂಟ

0

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ 12ನೇ ವರ್ಷದ ಕೋಟಿ-ಚೆನ್ನಯ
ಕ್ರೀಡಾಕೂಟ ಡಿ.7ರಂದು ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದ ದಿ.ಕೆ.ವಸಂತ ಬಂಗೇರ ಸಭಾ ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಬೆಳಿಗ್ಗೆ 7ಗಂಟೆಗೆ ಸಂಘದಲ್ಲಿ ಗುರುಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. 8 ಗಂಟೆಗೆ ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ ಕ್ರೀಡಾ ಜ್ಯೋತಿ ಹಸ್ತಾಂತರ ಮಾಡಲಿದ್ದಾರೆ.

ಬಳಿಕ ಸಂಘದ ನಿಕಟ ಪೂರ್ವ ಅಧ್ಯಕ್ಷ ಚಿದಾನಂದ ಎಲ್ದಕ್ಕ ವಾಹನ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಕ್ರೀಡಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಧ್ವಜಾರೋಹಣ ನಡೆಸಲಿದ್ದಾರೆ.
10ಗಂಟೆಗೆ ಕ್ರೀಡಾಕೂಟ ಉದ್ಘಾಟನೆಯನ್ನು ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ನಡೆಸಲಿದ್ದು, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ, ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜಿ. ಸುವರ್ಣ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2ಗಂಟೆಗೆ ಸಭಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಜರುಗಲಿದ್ದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್,ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಧ್ಯಕ್ಷ ಸತ್ಯಜಿತ್ ಸುರತ್ಕಲ್ ಭಾಗವಹಿಸುವರು.

ಸಂಜೆ 6ಗಂಟೆಗೆ ಸಮಾರೋಪ ಸಮಾರಾಭ ನಡೆಯಲಿದ್ದು ಮಂಗಳೂರು ಶ್ರೀ ಗೋಕರ್ಣ ನಾಥೇಶ್ವರ ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್. ಸೋಮ ಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪದ್ಮರಾಜ್ ಆರ್., ಬೆಳ್ತಂಗಡಿ ಗುರು ದೇವ ಕಾಲೇಜ್ ಅಧ್ಯಕ್ಷೆ ಪ್ರೀತಿತ ಧರ್ಮ ವಿಜೇತ್ ಹಾಗೂ ಇತರರು ಭಾಗವಹಿಸುವರು.

ಬಿಲ್ಲವ ಮಹಿಳಾ ವೇದಿಕೆಯಿಂದ ಬೆಳಿಗ್ಗೆ 10ಗಂಟೆಗೆ ಬಿಲ್ಲವ ಮಹಿಳಾ ವೇದಿಕೆಯಿಂದ ವಧು ವರರ ಅನ್ವೇಷಣೆ ಜರುಗಲಿದೆ.

LEAVE A REPLY

Please enter your comment!
Please enter your name here