



ಕೊಯ್ಯೂರು: “ಮನುಷ್ಯ ಭೂಮಿಗೆ ಬರುವಾಗ ಉಸಿರು ಇರುತ್ತದೆ. ಭೂಮಿಯಿಂದ ಹೋಗುವಾಗ ಹೆಸರು ಉಳಿಯುತ್ತದೆ” ಎಂಬುದಾಗಿ ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನೆರವೇರಿಸಿ ಶುಭಾಶಂಸನೆಗೈದರು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸಹಪ್ರಾಧ್ಯಾಪಕ ಮಾಧವ ಎಂ.ಕೆ. ತಮ್ಮ ದಿಕ್ಸೂಚಿ ಭಾಷಣದಲ್ಲಿ “ಸಾಧನೆ ಮಾಡುವ ಕನಸು ಕಾಣಬೇಕು. ಕನಸು ನನಸಾಗುವ ಪ್ರಯತ್ನ ಮಾಡಬೇಕು. ಜೀವನದ ವಿವಿಧ ಸನ್ನಿವೇಶಗಳು, ನಮ್ಮ ಜೀವನವನ್ನು ರೂಪಿಸುವ ಮೈಲಿಗಲ್ಲುಗಳು. ನಮ್ಮ ಯೋಚನೆ-ಯೋಜನೆಗಳು ನಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯುತ್ತವೆ.” ಎಂಬುದಾಗಿ ಅಭಿಪ್ರಾಯಪಟ್ಟರು.
ಪ್ರಧಾನ ಅಭ್ಯಾಗತರಾಗಿ ಭಾಗವಹಿಸಿದ್ದ ಉಜಿರೆ “ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ತಮ್ಮ ಬಾಲ್ಯದ ಕಷ್ಟದ ದಿನಗಳನ್ನು ಮೆಲುಕು ಹಾಕುತ್ತಾ” ಬಡತನ ಶಾಪವಲ್ಲ, ವರ.ಮನುಷ್ಯ ಸಮಾಜಮುಖಿ ಚಿಂತನೆಗಳ ಮೂಲಕ ಬದುಕು ರೂಪಿಸಿಕೊಳ್ಳಬೇಕು ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭುರವರು ತಮ್ಮ ಸುಶ್ರಾವ್ಯ ಗಾಯನದೊಂದಿಗೆ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಯ್ಯೂರು ಪ್ಯಾಕ್ಸ್ ನಿರ್ದೇಶಕ ಅಶೋಕ್ ಭಟ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಬಜಿಲ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಹೇಮಾವತಿ, ಇಸುಬು ಉಣ್ಣಾಲು, ಯಶವಂತ ಗೌಡ ಉಣ್ಣಾಲು,ಕೊಯ್ಯೂ ರು ಪ್ಯಾಕ್ಸ್ ಅಧ್ಯಕ್ಷ ರವೀಂದ್ರನಾಥ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್, ಪೆರ್ಲಬೈಪಾಡಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ಕೊರಮೇರು, ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಛಮೆ,ನಡ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ್, ಹೊಳೆನರಸೀಪುರದ ನಿವೃತ್ತ ಅಂಚೆ ಪಾಲಕರ ಉಮೇಶ್ ನೀರಾರಿ, ಉದ್ಯಮಿ ಗಳಾದ ಜಯಣ್ಣ ಗೌಡ ಮಿನoದೇಲು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜಿತ್, ಕಾರ್ಯದರ್ಶಿ ವಂಶಿಕ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಐಶ್ವರ್ಯ, ಚಿರಸ್ವಿ, ಸಹಲಾ, ವಂಶಿಕ, ವಿದ್ಯಾ, ವಿನಯ – ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮೋಹನ ಗೌಡ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ರಶ್ಮಿ ದೇವಿ ವರದಿ ವಾಚಿಸಿದರು. ರಾಜ್ಯ ಶಾಸ್ತ್ರ ಉಪನ್ಯಾಸಕ ಸಂತೋಷ್ ಕುಮಾರ್ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಲೆಕ್ಕ ಶಾಸ್ತ್ರ ಉಪನ್ಯಾಸಕಿ ಭವ್ಯ, ವ್ಯವಹಾರ ಅಧ್ಯಯನ ಉಪನ್ಯಾಸಕಿ ಪವಿತ್ರ, ಸಮಾಜಶಾಸ್ತ್ರ ಉಪನ್ಯಾಸಕ ಮಾಯಿಲ, ಅರ್ಥಶಾಸ್ತ್ರ ಉಪನ್ಯಾಸಕಿ ತೃಪ್ತಿ ವಿವಿಧ ಬಹುಮಾನಗಳ ಪಟ್ಟಿ ವಾಚಿಸಿದರು.
ಕಳೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 100 ಫಲಿತಾಂಶದ ಸಾಧನೆಗಾಗಿ ಎಲ್ಲಾ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣರಾದ ವಿದ್ಯಾರ್ಥಿಗಳಾದ ಭವ್ಯ, ರಂಝಿನ, ಫಾತಿಮಾ ಹಿಸನಾ, ಹಿತಾಕ್ಷಿ ಶೀಲಾವತಿ, ಪ್ರಜ್ಞಾ ಅವರನ್ನು ಸನ್ಮಾನಿಸಲಾಯಿತು. ದಾನಿಗಳಾದ ಮವೀನ್ ಕುಮಾರ್ ಕೊಯ್ಯೂರು, ಮೋಹನ ಗೌಡ ಕಡಮ್ಮಜೆ, ವಸಂತಗೌಡ ಬರೆಮೇಲು, ಸುರೇಶ್ ಕುಕ್ಕೊಟ್ಟು, ಕೂಸಪ್ಪ ಪೂಜಾರಿ ಬಜಿಲ, ಜಯಣ್ಣ ಮಿನoದೇಲು, ರಶ್ಮಿ ದೇವಿ ಉಗ್ರೋಡಿ, ಬೆಳ್ತಂಗಡಿಯ ಮಯೂರ ಜವಳಿ ಮಳಿಗೆ ಅವರನ್ನು ಗುರುತಿಸಿ ಗೌರವಿಸಲಾಯಿತು. ಅಪರಾಹ್ನ ವಿದ್ಯಾರ್ಥಿಗಳಿoದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.








