



ವೇಣೂರು: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ವೇಣೂರು ಯುವವಾಹಿನಿ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಡಿ. 9ರಂದು ಕಾನೂನು ಅರಿವು ಕಾರ್ಯಕ್ರಮ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟಕ ವಿಜಯೇಂದ್ರ ಟಿ.ಎಚ್., ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಮತ್ತು JMFC ಬೆಳ್ತಂಗಡಿ ಅವರು ಮಾನವ ಹಕ್ಕುಗಳು ಬಗ್ಗೆ ಅರಿವು ಮೂಡಿಸಿದರು. ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ ಅವರು ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.


ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ವಕೀಲ ಮನೋಹರ ಕುಮಾರ್ ಎ. ಕಾನೂನು ಪಾಲನೆ ಬಗ್ಗೆ ಮಾತಾಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಅವರು ಪೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿದರು.

ಅಕ್ಷಯ್ ಡಿ. ಠಾಣಾಧಿಕಾರಿ, ವೇಣೂರು ಪೊಲೀಸ್ ಠಾಣೆ ಪಿಎಸ್ಐ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು. ವಕೀಲರ ಸಂಘದ ಕಾರ್ಯದರ್ಶಿ ಪ್ರಶಾಂತ್ ಎಮ್., ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಂಗಾಧರ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉಸ್ತುವಾರಿಯನ್ನು ಘಟಕದ ಮಾಜಿ ಅಧ್ಯಕ್ಷ ಯೋಗೀಶ್ ಬಿಕ್ರೋಟ್ಟು ಮತ್ತು ಉಪಾಧ್ಯಕ್ಷ ಸತೀಶ್ ಎನ್. ಪಿ. ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಘಟಕದ ಎಲ್ಲಾ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು,ಸದಸ್ಯರು, ಸಲಹೆಗರಾರು, ಕಾಲೇಜಿನ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಘಟಕದ ಸ್ಥಾಪಕ ಅಧ್ಯಕ್ಷ ನಿತೀಶ್ ಹೆಚ್. ಕೋಟ್ಯಾನ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಶರಣ್ಯ ಕಾರ್ಯಕ್ರಮ ನಿರೂಪಣೆ ಮಾಡಿದರು. ಕಾಲೇಜಿನ ಪ್ರಾಧ್ಯಾಪಕ ವೆಂಕಟೇಶ ಪಿ. ಧನ್ಯವಾದ ಸಲ್ಲಿಸಿದರು.








