ಡಿ.13: ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ-ಹಿರಿಯ ವಿದ್ಯಾರ್ಥಿಗಳಿಗೆ ಆತ್ಮೀಯ ಆಹ್ವಾನ-ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಲೆಯ ಅಭಿವೃದ್ಧಿಗಾಗಿ ಕೈಜೋಡಿಸಲು ವಿನಂತಿ

0

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆಯನ್ನು ಡಿ.13ರಂದು ಪ್ರೌಢಶಾಲಾ ವಿಭಾಗದ ಆವರಣದಲ್ಲಿ ಆಯೋಜಿಸಲಾಗಿದ್ದು, ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಒಡನಾಟ, ಕಲಿಕೆ ಮತ್ತು ಬೆಳೆದು ಸಾಧನೆ ಮಾಡಿದ ಹಾದಿಯನ್ನು ನೆನಪಿಸಿಕೊಳ್ಳಲು ಸುಂದರ ಅವಕಾಶ ಮಾಡಿಕೊಡಲಾಗಿದೆ.

ಸಂಸ್ಥೆಯ ಹೆಮ್ಮೆಯ ಹಿರಿಯ ವಿದ್ಯಾರ್ಥಿಗಳು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಸ್ಥೆಯ ಪ್ರಗತಿಗಾಗಿ ಯೋಜನೆ ರೂಪಿಸಿ ಶಾಲೆಯ ಅಭಿವೃದ್ಧಿಗಾಗಿ ಕೈಜೋಡಿಸಲು ಶಾಲಾ ಶಿಕ್ಷಕ ವೃಂದ ಮತ್ತು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here