ಧರ್ಮಸ್ಥಳ: ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ-ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ವೇದಿಕೆ: ಧನ್ಯ ಕುಮಾರ್

0

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆಯು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಭವ್ಯವಾಗಿ ಮೂಡಿಬಂದಿತು.

ಸಮಾರಂಭವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಶಾಲೆಗಳಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗು ಕ್ರೀಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಭವಿಷ್ಯದಲ್ಲಿ ಪ್ರತಿಭಾವಂತರಾಗಿ ರೂಪಿಸುತ್ತದೆ. ಗುರು ಹಿರಿಯರು ಹಾಗೂ ಪೋಷಕರ ಪ್ರೋತ್ಸಾಹ ಮತ್ತು ಮಾರ್ಗದರ್ಶನವನ್ನು ಸಕಾರಾತ್ಮಕವಾಗಿ ಅಳವಡಿಸಿಕೊಂಡರೆ ಈ ದಿನದ ಪ್ರತಿಭೆಗಳು ಇನ್ನಷ್ಟು ಉನ್ನತ ಮಟ್ಟದಲ್ಲಿ ಬೆಳಗಬವುದು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನ ವಾರ್ಷಿಕ ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಕುಣಿತ ಜಾನಪದ ಗೀತೆ, ನೃತ್ಯ, ಕುಣಿತ ಭಜನೆ, ಹುಲಿ ಕುಣಿತ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮವನ್ನು ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ ವೀಕ್ಷಿಸಿ ವಿದ್ಯಾರ್ಥಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

‘ಮಂಜುಳಾ’ ಹಸ್ತಪ್ರತಿ ಬಿಡುಗಡೆ, ಸನ್ಮಾನ : ಸಮಾರಂಭದಲ್ಲಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ವರದಿ ಸೇರಿದಂತೆ ವಿದ್ಯಾರ್ಥಿಗಳಿಂದ ವಿರಚಿತವಾದ ಕಥೆ,ಕವನ, ಚಿತ್ರ ಕಥೆ, ಲೇಖನಗಳಿಂದ ವಿಶೇಷವಾಗಿ ತಯಾರಿಸಿದ ಮಂಜುಳಾ ಹಸ್ತ ಪ್ರತಿಯನ್ನು ಡಾ. ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಬೆಸ್ಟ್ ಔಟ್ ಗೋಯಿಂಗ್ ವಿದ್ಯಾರ್ಥಿನಿ ಪಂಚಮಿಯವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯ ಕುಮಾರ್, ಶಾಲೆಯ ಮುಖ್ಯಸ್ಥೆ ಜಯ ಶ್ರೀ ಜೈನ್ ಸೇರಿದಂತೆ ಇತರೆ ಅಧ್ಯಾಪಕರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಸಂಚಾಲಕ ಅನಂತ ಪದ್ಮನಾಭ ಭಟ್, ಮುಖ್ಯ ಶಿಕ್ಷಕಿ ಜಯಶ್ರೀ ಜೈನ್ ಸೇರಿದಂತೆ ಇತರೆ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಸೇರಿದಂತೆ ಶಿಕ್ಷಕರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಅಧ್ಯಾಪಕರಾದ ಯುವರಾಜ್ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here