ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ದ್ವಿತೀಯ ಸ್ಥಾನ

0

ಉಜಿರೆ: ಮಹಿಳೆಯರ ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟದಲ್ಲಿ ಪ್ರಕೃತಿ ಚಿಕಿತ್ಸಾ ಕಾಲೇಜು ಸಾಧನೆ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಹಾಗೂ ಮಂಡ್ಯ ವೈದ್ಯಕೀಯ ಕಾಲೇಜು ಸಹಯೋಗದಲ್ಲಿ ಡಿ.10 ಮತ್ತು 11ರಂದು ಆಯೋಜಿಸಲಾದ ರಾಜ್ಯಮಟ್ಟದ ಮಹಿಳೆಯರ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಕಾಲೇಜು ತಂಡವು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಗಳಿಸಿದೆ.

ಸೆಮಿಫೈನಲ್ಪಂದ್ಯಾಟದಲ್ಲಿ ಎಸ್‌ಎಸ್‌ಐಎಂಎಸ್, ದಾವಣಗೆರೆ ತಂಡವನ್ನು 4–2 ಗೋಲುಗಳ ಅಂತರದಲ್ಲಿ ಸೋಲಿಸಿ ಫೈನಲ್‌ಗೆ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಕಾಲೇಜು ತಂಡವು ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿತು.

ಕಾಲೇಜಿನ ವಿದ್ಯಾರ್ಥಿನಿಯರಿಗೆ ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್‌ನ ಹ್ಯಾಂಡ್‌ಬಾಲ್ ತರಬೇತಿದಾರ ಸುದೀನ್ ಅವರು ತರಬೇತಿ ನೀಡಿದ್ದು, ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ಅವರು ಸಮಗ್ರ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here