






ಧರ್ಮಸ್ಥಳ: ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ New Vision Genearation ವತಿಯಿಂದ ಡಿ. 18ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ನೆರವೇರಿಸಿದರು.



ಪಂಚಾಯತ್ ಸದಸ್ಯ ಸುಧಾಕರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ., New Vision ಜನರೇಷನ್ ನ ಡಾ. ರಾಮಚಂದ್ರ ಹಾಗೂ ಸಿಬ್ಬಂದಿವರ್ಗ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಪ್ರಮೀಳಾ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.









