






ಬೆಳ್ತಂಗಡಿ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಡಿ.21ರಂದು ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಅವರು ಸಮವಸ್ತ್ರ ವಿತರಣೆಯನ್ನು ಮಾಡಿದರು.



ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯತಿನ ಸದಸ್ಯ ಪ್ರಮೋದ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿಧಿ ನಂದಿನಿ, ಭಜನಾ ತರಬೇತುದಾರ ಸಂದೇಶ್ ಮದ್ದಡ್ಕ, ಭಜನಾ ಮಂಡಳಿಯ ಅಧ್ಯಕ್ಷರಾದ ವಸಂತ ಮಡಕ್ಕಿಲ, ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು. ಭಜನಾ ಮಂಡಳಿಯ ಗೌರವಾಧ್ಯಕ್ಷ ಸದಾನಂದ ಶೆಟ್ಟಿ ಮಡಪಾಡಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.









