






ಪಟ್ಟೂರು: ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಡಿ.22ರಂದು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ನಿತ್ಯ ಜೀವನದಲ್ಲಿ ಗಣಿತದ ಮಹತ್ವ ಹಾಗೂ ಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.



ಶಾಲಾ ಗಣಿತ ಶಿಕ್ಷಕಿ ಮೇಘಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶ್ರೀನಿವಾಸ ರಾಮಾನುಜನ್ ರವರ ಸಾಧನೆಗಳ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಗಣಿತ ವಿಷಯವನ್ನು ಸುಲಭವನ್ನಾಗಿಸಲು ಆಟದೊಂದಿಗೆ ಪಾಠ ಎನ್ನುವ ಪರಿಕಲ್ಪನೆಯೊಂದಿಗೆ ಚಟುವಟಿಕೆ ನಡೆಸಿದರು.









