








ಬಂದಾರು: ಗ್ರಾಮ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ದಿನದ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಅನಿತಾ ಉದಯ ಕುರುಡಂಗೆ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ಸಮುದಾಯ ಅರೋಗ್ಯ ಅಧಿಕಾರಿ ಜಗದೀಶ್, ಆಶಾ ಕಾರ್ಯಕರ್ತೆ ರಾಜೀವಿ, ಅಂಗನವಾಡಿ ಕಾರ್ಯಕರ್ತೆಯರಾದ ವಾಣಿ ವಿ. ಮತ್ತು ಚೇತನ, ಸಹಾಯಕಿ ದಯಾಮಣಿ ಹಾಗೂ ಪೋಷಕರು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.









