ಅಳದಂಗಡಿ: ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಅವರು ನೀಡಿದ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

0

ಅಳದಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳೂರು ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಅವರು ನೀಡಿರುವ 2.5 ಲಕ್ಷ ಮೊತ್ತದ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಜರಗಿತು.

ಮಂಗಳೂರು ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ನ ಮೆಡಿಕಲ್ ಸರ್ವಿಸಸ್ ಜನರಲ್ ಮ್ಯಾನೇಜರ್ ಡಾ. ಯೋಗೀಶ್ ಅವರು ಪ್ರಯೋಗಾಲಯ ಉಪಕರಣಗಳನ್ನು ಪ್ರಾಂಶುಪಾಲರಿಗೆ ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸನ್ನಿ ಕೆ.ಎಂ. ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅವರು ವಿದ್ಯಾರ್ಥಿಗಳು ವಿಜ್ಞಾನ ಉಪಕರಣಗಳ ಸದುಪಯೋಗ ಪಡೆದು ಕಲಿಕೆಯಲ್ಲಿ ಉನ್ನತ ಸಾಧನೆ ಮಾಡಿ ಪೋಷಕರಿಗೆ ಸಮಾಜಕ್ಕೆ ಕೀರ್ತಿವಂತರಾಗಬೇಕು ಎಂದು ಶುಭ ಹಾರೈಸಿದರು. ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಸಿ.ಎಸ್. ಆರ್. ಸಂಚಾಲಕ ವಿವೇಕ್ ಕೋಟ್ಯಾನ್, ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್, ಹಿರಿಯ ಉಪನ್ಯಾಸಕಿ ಭಾರತಿ, ವಿದ್ಯಾರ್ಥಿ ನಾಯಕರಾದ ಸುದರ್ಶನ್ ಮತ್ತು ಶ್ರೇಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಳೆದ ವರ್ಷ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರದಲ್ಲಿ ಕ್ರೀಡಾ ಸ್ಪರ್ಧೆಗಳ ಪಟ್ಟಿಯನ್ನು ರಾಜ್ಯಶಾಸ್ತ್ರ ಉಪನ್ಯಾಸಕರಾದ ಸಂದೀಪ್ ಮತ್ತು ಸಮಾಜಶಾಸ್ತ್ರ ಉಪನ್ಯಾಸಕಿ ತುಳಸಿ ವಾಚಿಸಿದರು. ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಪಟ್ಟಿಯನ್ನು ರಸಾಯನಶಾಸ್ತ್ರ ಉಪನ್ಯಾಸಕ ರಾಮಚಂದ್ರ ಎ.ಜಿ., ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರ ಪಟ್ಟಿಯನ್ನು ಭೌತಶಾಸ್ತ್ರ ಉಪನ್ಯಾಸಕಿ ಪಲ್ಲವಿ ವಾಚಿಸಿದರು. ಗಣಿತಶಾಸ್ತ್ರ ಉಪನ್ಯಾಸಕ ಸದಾನಂದ ಕುಲಾಲ್ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕ ಪ್ರಶಾಂತ್ ಕುಮಾರ್ ನಿರೂಪಿಸಿದರು. ಕನ್ನಡ ಉಪನ್ಯಾಸಕಿ ಗಾಯತ್ರಿ ಅವರು ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here