ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ-ನಿವೃತ್ತ ಪ್ರಾಂಶುಪಾಲ ಪ್ರೋ. ಎಸ್. ಪ್ರಭಾಕರ್ ನಿಧನ

0

ಉಜಿರೆ: ಉಜಿರೆಯ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ, ಎಸ್.ಡಿ.ಎಂ ಕಾಲೇಜು ಉಜಿರೆಯ ನಿವೃತ್ತ ಪ್ರಾಂಶುಪಾಲ ಪ್ರೋ. ಎಸ್ ಪ್ರಭಾಕರ್ ಡಿ.24ರಂದು ವಿಧಿವಶರಾಗಿದ್ದಾರೆ. ಉಜಿರೆಯ ನಿವಾಸಿಯಾಗಿರುವ ಪ್ರೊ. ಎಸ್. ಪ್ರಭಾಕರ್ ಸಾವಿರಾರು ವಿದ್ಯಾರ್ಥಿಗಳ ಪ್ರಾಂಶುಪಾಲರೆಂದೇ ಖ್ಯಾತಿ ಪಡೆದಿದ್ದಾರೆ. ಎಸ್ ಡಿ ಎಂ ಕಾಲೇಜು ಉಜಿರೆಯ ಸ್ಥಾಪಕಾ ಪ್ರಾಂಶುಪಾಲರಾಗಿ 27 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದಾರೆ. ಈ ವೇಳೆ ಗುಣಾತ್ಮಕ ಅಧ್ಯಯನಕ್ಕೆ ಒತ್ತು ಕೊಟ್ಟು ಕಾಲೇಜನ್ನು ರಾಷ್ಟ್ರಮಟ್ಟದಲ್ಲಿ ಹೆಸರುಗಳಿಸುವಂತೆ ಮಾಡಿದ್ದಾರೆ.

ಪ್ರಾಂಶುಪಾಲರಾಗಿ ನಿವೃತ್ತರಾದ ನಂತರ ಎಸ್. ಡಿ. ಎಂ ಸೊಸೈಟಿಯ ಕಾರ್ಯದರ್ಶಿಯಾಗಿ ಸಂಸ್ಥೆಯ ಏಳಿಗೆಗೆ ಶ್ರಮಿಸಿದ್ದಾರೆ. ಇವರು ವಿದ್ಯಾರ್ಥಿಗಳಿಗೆ ಅಪಾರ ಪ್ರೋತ್ಸಾಹ ನೀಡುತ್ತಿದ್ದು, ಬರವಣಿಗೆಯಲ್ಲಿ ಚಿತ್ತ ನೆಟ್ಟಿದ್ದರು. “ಮಂಜುವಾಣಿ” ಕನ್ನಡ ಮಾಸ ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ವಿಶ್ವವಿದ್ಯಾಲಯ, ಹಂಪಿಯ ಪ್ರಸಾರಾಂಗದಲ್ಲಿ ಸಂಪಾದಕರಾಗಿ ಸೇವೆ ಸಲ್ಲಿಸಿ, ಹಲವು ಪ್ರಕಟಣೆಗಳನ್ನು ಹೊರತಂದಿದ್ದಾರೆ. ಅದ್ಯಾಪಕ ಭೂಷಣ ಪ್ರಶಸ್ತಿಗೂ ಪಾತ್ರವಾಗಿದ್ದರು. ಅವರು ಪುತ್ರಿ ಶರ್ಮಿಳಾರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here