







ಕುವೆಟ್ಟು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುವೆಟ್ಟು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯಿಂದ ಪ್ರತಿಭಾ ಪುರಸ್ಕಾರ-2025 ಕಾರ್ಯಕ್ರಮ ಡಿ.20ರoದು ಜರುಗಿತು.
ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ರಿಯಾಝ್, ಸುಮಂಗಳ ಪ್ರಭು, ಅಮೀನಾ, ಶಾಲಿನಿ, ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ, ಮಡಂತ್ಯಾರು ಚರ್ಚ್ ನ ಧರ್ಮಗುರು ರೆ|ಫಾದರ್ ಸ್ಟ್ಯಾನಿ ಗೋವಿಯಸ್, ಮದ್ದಡ್ಕ ಮಸೀದಿಯ ಧರ್ಮಗುರು ಹಾಫಿಳ್ ಮುಹಿನುದ್ದೀನ್ ರಝ್ವಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಉದ್ಯಮಿ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಯೋಜನಾಧಿಕಾರಿ ಯಶೋಧ, ವಾಣಿಜ್ಯ ಲೆಕ್ಕಪತ್ರ ಹಾಗೂ ತೆರಿಗೆ ಸಲಹೆಗಾರ ಸಂತೋಷ್ ಕೆ. ಮಂಗಳೂರು, ಹ್ಯಾವೆಲ್ಸ್ ಇಂಡಿಯಾ ಲಿಮಿಟೆಡ್ ನ ರಾಜ್ಯ ತರಬೇತುದಾರ ಧನಂಜಯ ಕೆ. ಆಲಂದಿಲ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ, ಉಪಾಧ್ಯಕ್ಷೆ ಲಾವಣ್ಯ ಶೆಟ್ಟಿ ಅರ್ಕಜೆ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ರಾಯಿಶ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ವರದಿ ವಾಚಿಸಿ, ಶಾಲಾ ಅಧ್ಯಾಪಕ ವೃಂದದವರು ಕಾರ್ಯಕ್ರಮ ನಿರೂಪಿಸಿದರು. ಅoಗನವಾಡಿ ಪುಟಾಣಿಗಳಿoದ ಹಾಗೂ ಶಾಲಾ ವಿದ್ಯಾರ್ಥಿಗಳ ಶಾಲಾ ಹಿರಿಯ ವಿದ್ಯಾರ್ಥಿಗಳ ನ್ರತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಿರಣ್ ಎಸ್. ಪಿ. ವಂದಿಸಿದರು.









