








ಅಂಡಿಂಜೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಹಾಷಿಕ್ ದ.ಕ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ಹಿರಿಯ ಪ್ರಾಥಮಿಕ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಪಡೆದಿರುತ್ತಾರೆ. ಅವರು ಅಂಡಿಂಜೆ ಕೋಡಿ ಹರೀಶ್ ಅಂಚನ್ ಮತ್ತು ಚಂದ್ರಿಕಾ ದಂಪತಿಗಳ ಪುತ್ರನಾಗಿರುತ್ತಾರೆ.
ಅವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು, SDMC ಅಧ್ಯಕ್ಷರು, ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ.









