







ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ. 24, 25 ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಇದರ ಅಂಗವಾಗಿ ಡಿ. 25 ರಂದು ನಡೆದ ಧಾರ್ಮಿಕ ಸಭೆಯು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಲಿಂಗಪ್ಪ ಪೂಜಾರಿ ಬನಂದೂರು ಇವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂಧರ್ಭದಲ್ಲಿ ದೇವಸ್ಥಾನ ಬೈಲುವಾರಿನ ಹಿರಿಯ ಸ್ವಯಂ ಸೇವಕ ಸದಸ್ಯ ರಾಮಣ್ಣ ಗೌಡ ವಚ್ಚ ಇವರನ್ನು ಸನ್ಮಾನಿಸಲಾಯಿತು.
ಧಾರ್ಮಿಕ ಭಾಷಣಕಾರರಾಗಿ ಆಗಮಿಸಿದ ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ ರೋಹಿಣಿ ಶ್ರೀಪಾದ ಧಾರ್ಮಿಕ ಭಾಷಣ ಗೈದರು. ಮುಖ್ಯ ಅತಿಥಿಗಳಾಗಿ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗೌಡ ಆರಿಕೋಡಿ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ಭಾಗವಹಿಸಿ ಮಾತನಾಡಿದರು.



ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ ವಂದಿಸಿದರು.
ವೇದಿಕೆಯಲ್ಲಿ ಹೇಮಾವತಿ ಬಿ ಜೀವಂಧರ್ ಕುಮಾರ್ ಜೈನ್ ಬೆಳಾಲು ಗುತ್ತು, ವ್ಯವಸ್ಥಾಪನಾ ಸಮಿತಿಯ ಅಸ್ರಣ್ಣ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು,ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಗೌಡ,ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಪೂಜಾರಿ ಪೋಸೊಟ್ಟು ಉಪಸ್ಥಿತರಿದ್ದರು.
ಸಹಕಾರ ನೀಡಿದ ಅತಿಥಿ ಗಳಾದ ಹರೀಶ್ ಆರಿಕೋಡಿ, ಕಿರಣ್ ಚಂದ್ರ ಪುಷ್ಪಗಿರಿ, ಮೋಹನ್ ಕುಮಾರ್ ಲಕ್ಷ್ಮೀ ಗ್ರೂಪ್, ರೋಹಿಣಿ ಶ್ರೀಪಾದ್, ಶೈಕ್ಷಣಿಕ ಸಾಧಕಿ ಕು. ಮನಸ್ವಿ ಇವರನ್ನು ಗೌರವಿಸಲಾಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಮತ್ತು ಗಿರೀಶ್ ಮಂಜೊತ್ತು ಕಾರ್ಯಕ್ರಮ ನಿರೂಪಿಸಿದರು.ಬಳಿಕ ಪರಿವಾರ ದೈವಗಳಾದ ಶ್ರೀ ರಕ್ತೇಶ್ವರಿ, ಭೈರವ, ಕಲ್ಲುರ್ಟಿ ಪಂಜುರ್ಲಿ ದೈವಗಳಿಗೆ ಸಿರಿಸಿಂಗಾರ ನರ್ತನ ಸೇವೆ ನಡೆಯಿತು.
ವ್ಯವಸ್ಥಾಪನ ಸಮಿತಿಯ ಸದಸ್ಯರು,ಜಾತ್ರೋತ್ಸವ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಸದಸ್ಯರು,ಮಹಿಳಾ ಸಮಿತಿಯ ಸದಸ್ಯರು,ಭಜನಾ ಮಂಡಳಿಯ ಪದಾಧಿಕಾರಿಗಳು ಸದಸ್ಯರು, ಊರ ಪರ ಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.









