ಬೆಳ್ತಂಗಡಿ: ಪಿ.ಎಂ. ಶ್ರೀ ಮಾದರಿ ಶಾಲಾ ವಿದ್ಯಾರ್ಥಿಗಳಿಗೆ ಬಿ.ಕೆ ಧನಂಜಯ ರಾವ್ ವಕೀಲರಿಂದ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳು ಮಾಹಿತಿ ಕಾರ್ಯಾಗಾರ

0

ಬೆಳ್ತಂಗಡಿ: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮದಡಿಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳು ಎಂಬ ವಿಷಯದ ಬಗ್ಗೆ ನಮ್ಮ ಶಾಲಾ ಹಿರಿಯ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಖ್ಯಾತ ವಕೀಲರಾದ ಶ್ರೀಯುತ ಬಿ.ಕೆ ಧನಂಜಯ ರಾವ್ ಮಾಹಿತಿಯನ್ನು ನೀಡಿದರು. ನಮಗೆ ಸಂವಿಧಾನ ನೀಡಿರುವ ಹಕ್ಕುಗಳಿಗೆ ಎಷ್ಟೋ ಪ್ರಾಮುಖ್ಯತೆ ಇದೆಯೋ ಅಷ್ಟೇ ಪ್ರಾಮುಖ್ಯವಾದೇ ನಾಗರಿಕ ಕರ್ತವ್ಯಗಳು ಇದೆ. ನಾವು ನೆಲ, ಜಲ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ, ವನ್ಯ ಜೀವಿಗಳ ರಕ್ಷಣೆ, ಸಾರ್ವಜನಿಕ ಸಂಪತ್ತುಗಳ ರಕ್ಷಣೆ ಮತ್ತು ದೇಶ ಕಾಯುವ ಸೈನಿಕರಿಗೆ ಗೌರವ ಹಾಗೂ ಭಾಷೆ, ಸಂಸ್ಕೃತಿ, ಧಾರ್ಮಿಕ ಆಚರಣೆಗಳನ್ನು ಉಳಿಸುವ ಕಾರ್ಯವನ್ನು ಮಾಡುವಂತೆ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ವಿವರಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಝಮೀರುದ್ದೀನ್, ಶಾಲಾ ಮುಖ್ಯೋಪಾಧ್ಯಾಯ ಸೂರ್ಯನಾರಾಯಣ ಪುತ್ತೂರಾಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ನೀನಾ ಕುಮಾರ್ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here