ಡಿ. 29: ಶಿಶಿಲ ಸಂಪೂರ್ಣ ಶೋಭಾಯಮಾನ-ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆಗೆ ಬರಲಿದ್ದಾರೆ ಕೇಂದ್ರ ಸಚಿವೆ- ಶೋಭಾ ಕರಂದ್ಲಾಜೆ-ಸಾಯಂಕಾಲ ನಡೆಯಲಿದೆ ಸಾಂಸ್ಕೃತಿಕ ವೈಭವ

0

ಶಿಶಿಲ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳು ಕಟ್ಟಿಸಿದ ಸರಕಾರಿ ಶಾಲೆಯ ಉದ್ಘಾಟನಾ ಸಮಾರಂಭ ಮತ್ತು ಶಾಲಾ ವಿದ್ಯಾರ್ಥಿಗಳು, ಹಳೆವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಂದ ಸಾಂಸ್ಕೃತಿಕ ವೈಭವ ಡಿ. 29ರಂದು ನಡೆಯಲಿದೆ.

ಬೆಳಿಗ್ಗೆ 10ಕ್ಕೆ ನೂತನ ಕೊಠಡಿಗಳ ಉದ್ಘಾಟನೆಯನ್ನು ಕೇಂದ್ರ ಸರಕಾರದ ಅತೀ ಸಣ್ಣ ಮಧ್ಯಮ ಕೈಗಾರಿಕಾ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಹರೀಶ್‌ ಪೂಂಜ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಫರೀದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಎಸ್, ಸಂಸದ ಕ್ಯಾ| ಬ್ರಿಜೇಶ್ ಚೌಟ, ರಾಜ್ಯಸಭೆ ಸಂಸದ ಡಾ.ಡಿ. ವೀರೇಂದ್ರ ಹೆಗ್ಗಡೆ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕ ಎಸ್ ಎಲ್ ಭೋಜೆ ಗೌಡ, ಐವನ್ ಡಿ’ಸೋಜ, ಪ್ರತಾಪ್‌ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬೊಟ್ಯಾಡಿ, ಶಿಶಿಲ ಗ್ರಾ. ಪಂ ಅಧ್ಯಕ್ಷ ಸುದಿನ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಸಿಆರ್‌ಪಿ ಕೊಕ್ಕಡ ಮತ್ತು ಪೆರ್ಲ ಕ್ಲಸ್ಟರ್ ವಿಲ್ಫ್ರೇಡ್ ಪಿಂಟೋ ಭಾಗವಹಿಸಲಿದ್ದಾರೆ.

ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಹಕಾರದಲ್ಲಿ ಸುಮಾರು ಹತ್ತು ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶೌಚಾಲಯ ಕೊಠಡಿ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.

ಸಾಂಸ್ಕೃತಿಕ ವೈಭವ: ಸಂಜೆ 6ರಿಂದ ಸಾಂಸ್ಕೃತಿಕ
ವೈಭವವು ನಡೆಯಲಿದ್ದು ಇದರ ಸಭಾ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮೋಹನ್‌ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೆಕಳ ಹಾಜಬ್ಬ, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾ‌ರ್, ಮೆಂಬ‌ರ್ ಗ್ಲೋಬಲ್‌ ಎಕ್ಸಿಕ್ಯೂಟಿವ್ ಕಮಿಟಿ ಸಿ.ಇ.ಒ. (ಇಂಡಿಯಾ) ರಾಜೇಶ್ ಫದ್ಕೆ, ಉಧ್ಯಮಿ ಶಶಿಧರ್ ಶೆಟ್ಟಿ ಬರೋಡ, ಉದ್ಯಮಿಗಳು ಬೆಂಗಳೂರು, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ ಪುಷ್ಪಗಿರಿ, ಬೆಸ್ಟ್ ಫೌಂಡೇಶನ್‌ ಅಧ್ಯಕ್ಷ ರಕ್ಷಿತ್ ಶಿವಾರಂ ಹಾಗೂ ಇತರರು ಭಾಗವಹಿಸಲಿದ್ದಾರೆ.

ರಾತ್ರಿ ಗಂಟೆ 9.30 ರಿಂದ ಚೈತನ್ಯ ಕಲಾವಿದರು ಬೈಲೂರು ವತಿಯಿಂದ ರಾಘು ಮಾಸ್ಟ್ರು, ಹಾಸ್ಯಮಯ ತುಳುನಾಟಕ ನಡೆಯಲಿದೆ. ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here