






ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಸಮ್ಮೇಳನ ಸಂಯೋಜನ ಸಮಿತಿಯಿಂದ ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.28ರಂದು ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.

ಬೆಳಿಗ್ಗೆ ಕನ್ನಡ ಭುವನೇಶ್ವರಿಯ ಮೆರವಣಿಗೆ ಕೊಯ್ಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಕೊಯ್ಲು ಸಭಾಂಗಣದಿಂದ ಸಮ್ಮೇಳನ ಸಭಾಂಗಣದವರೆಗೆ ನಡೆಯಿತು. ಮೆರವಣಿಗೆ ಚಾಲನೆಯನ್ನು ಬದುಕು ಕಟ್ಟೋಣ ಬನ್ನಿ ಸಂಚಾಲಕ ಕೆ. ಮೋಹನ್ ಕುಮಾರ್ ನೀಡಿದರು. ನಂತರ ಧ್ವಜಾರೋಹಣವನ್ನು ಕಣಿಯೂರು ರೈತಬಂಧು ಮಾಲಕ ಶಿವಶಂಕರ್ ನಾಯಕ್, ಪರಿಷತ್ತು ಧ್ವಜವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ, ಸಮ್ಮೇಳನ ಧ್ವಜವನ್ನು ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷ ಡಿ.ಯದುಪತಿ ಗೌಡ ಮಾಡಿದರು.



ಸಾಹಿತ್ಯ ಸಮ್ಮೇಳನ ಉದ್ಘಾಟನ ಸಮಾರಂಭ: ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಉದ್ಘಾಟನೆಯನ್ನು ಹಾವೇರಿ ಜಾನಪದ ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿ ಕೆ.ಚಿನ್ನಪ್ಪ ಗೌಡ ಮಾಡಿದರು. ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷ ಬಿ.ಭುಜಬಲಿ ಧರ್ಮಸ್ಥಳ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಪ್ರೋ.ಎ. ಕೃಷ್ಣಪ್ಪ ಪೂಜಾರಿ ಬೆಳ್ತಂಗಡಿ, , ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ಆಶಯ ನುಡಿ ಮಾತನಾಡಿದರು. ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ದಯಾಮಣಿ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಅಧ್ಯಕ್ಷ ಡಿ.ಯದುಪತಿ ಗೌಡ ಪ್ರಸ್ತಾವನೆ ಗೈದರು, ಸಾಹಿತ್ಯ ಪರಿಷತ್ತು ತಾಲೂಕು ಘಟಕ ಕಾರ್ಯದರ್ಶಿ ರಾಮಕೃಷ್ಣ ಭಟ್, ಸಮಿತಿಯ ಕಾರ್ಯಾಧ್ಯಕ್ಷ ರಾಧಾಕೃಷ್ಣ, ಮೋಹನ್ ಕುಮಾರ್, ಸಮಿತಿಯ ಗೌರವಾಧ್ಯಕ್ಷ ಧರ್ಣಪ್ಪ ಗೌಡ, ಸಮ್ಮೇಳನ ಸಂಯೋಜನ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಗೌಡ ಪಾಂಬೇಲು, ಪ್ರಧಾನ ಸಂಚಾಲಕ ದಾಮೋದರ್ ಗೌಡ ಉಪಸ್ಥಿತರಿದ್ದರು.

ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ ಮಾತನಾಡಿ ಕನ್ನಡಕ್ಕೆ ನಾವು ಪ್ರೋತ್ಸಾಹವನ್ನು ಕೊಡಬೇಕು. ಕನ್ನಡ ಭಾಷೆ ಉಳಿಯಬೇಕಾದರೆ ಇಂತಹ ಸಮ್ಮೇಳನ ಬೇಕು ಎಂದರು.
ಸಮ್ಮೇಳನ ಸಂಯೋಜನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಅಗ್ರಸಾಲೆ ಸ್ವಾಗತಿಸಿ, ಸಮ್ಮೇಳನ ಸಮಿತಿಯ ಪ್ರಧಾನ ಸಂಯೋಜಕ ರಾಮಚಂದ್ರ ದೊಡಮನಿ ಹಾಗೂ ದೀಪ್ತಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಕಾರ್ಯದರ್ಶಿ ರಾಮಕೃಷ್ಣ ಭಟ್ ಧನ್ಯವಾದವಿತ್ತರು.









