






ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಮೂಲ್ಕಿ ಅರಮನೆ ವೆಲ್ಫೇರ್ ಪೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ನೀಡಲ್ಪಡುವ ಪ್ರತಿಷ್ಠಿತ ಅರಸು ಪ್ರಶಸ್ತಿ 2025 ಪುರಸ್ಕಾರ ಲಭಿಸಿದೆ. ಸಂಘದ ಪರವಾಗಿ ಉಪಾಧ್ಯಕ್ಷರ ಜಗದೀಶ್ಚಂದ್ರ ಡಿ.ಕೆ. ಪ್ರಶಸ್ತಿ ಸ್ವೀಕರಿಸಿದರು.


ಮೂಲ್ಕಿ ಅರಮನೆ ಅರಸ ಎಂ. ದುಗ್ಗಣ್ಣ ಸಾವಂತರು, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್, ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ, ಎಮ್.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಬಾಹುಬಲಿ ಪ್ರಸಾದ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅದ್ಯಕ್ಷ ವಸಂತ ಬೆರ್ನಾಡ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಜೈನ್, ಡಾ. ಅಮರಶ್ರೀ ಅಮರನಾಥ ಶೆಟ್ಟಿ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ನಮ್ಮ ಕುಡ್ಲ ಚಾನೆಲ್ ನ ಲೀಲಾಕ್ಷ ಕರ್ಕೇರ, ಡಾ. ಗಣೇಶ್ ಅಮೀನ್ ಸಂಕಮಾರ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹಳೆಯಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕ ಶಿವರಾಜ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.









