ಗುರಿಪಳ್ಳ: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯ ಕ್ಷೇತ್ರದ ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಗುರಿಪಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಶಾಂಭ ಶೆಟ್ಟಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾಲೆಗೆ ಸಾಕಷ್ಟು ಪ್ರಮಾನದಲ್ಲಿ ಸಹಕಾರ ನೀಡುತ್ತಿದ್ದು ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರು ಅಬಿವೃದ್ದಿ ಹೊಂದುತ್ತಿರುವುದು ಸಂತಸದ ಸಂಗತಿಯಾಗಿದ್ದು ಊರಿನಲ್ಲಿ ಜ್ಞಾನ ವಿಕಾಸ ಕೇಂದ್ರಕ್ಕೆ ಅವಕಾಶ ಒದಗಿಸಿದಕ್ಕೆ ಸಂತಸ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಶಾಂತ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ನಡೆಯುವ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಆರ್ಥಿಕ ಸಮಾಲೋಚಕಿ ಉಷಾ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಜ್ಞಾನ ವಿಕಾಸ ಕಾರ್ಯಕ್ರಮಕ್ಕೆ ಗುರಿಪಳ್ಳದಲ್ಲಿ ಅವಕಾಶ ದೊರೆತಿರುವುದು ತುಂಬಾ ಸಂತೋಷವಾಗಿದೆ ಜ್ಞಾನ ವಿಕಾಸ ಕೇಂದ್ರದದಿಂದ ಮಹಿಳೆಯರು ಉತ್ತಮ ಮಾಹಿತಿಯೂoದಿಗೆ ಆತ್ಮಸ್ಥೈರ್ಯ ತುಂಬುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರು ಹಾಗೂ ಗುರಿಪಳ್ಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಸೌಮ್ಯ ಲತಾರವರು ವಹಿಸಿದ್ದರು. ಬೇಬಿ ಉಮೇಶ್ ಮತ್ತು ಸುಮಿತಾ ರವರು ಅನಿಸಿಕೆ ವ್ಯಕ್ತ ಪಡಿಸಿದರು. ವೇದಿಕೆಯಲ್ಲಿ ಮೇಲ್ವಿಚಾರಕಿ ಉಷಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಪುಷ್ಪಾವತಿ ವರದಿ ವಾಚಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆ ಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಸಂಯೋಜಕಿ ಅನಿತಾ ಸ್ವಾಗತಿಸಿ, ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಪವಿತ್ರ ನಿರೂಪಿಸಿದರು. ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಮನಿಷಾ ಧನ್ಯವಾದ ನೀಡಿದರು.

LEAVE A REPLY

Please enter your comment!
Please enter your name here