ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ: ಉದ್ಘಾಟಿಸಿ ಶುಭ ಹಾರೈಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

0

ಅರಸಿನಮಕ್ಕಿ: ಅರಸಿನಮಕ್ಕಿ ಕೃಷಿ ಪತ್ತಿನ ಸಹಕಾರ ಸೊಸೈಟಿ ಕಟ್ಟಡದಲ್ಲಿ ನಿರ್ಮಾಣಗೊಂಡಿರುವ ಜನೌಷಧಿ ಕೇಂದ್ರವನ್ನು ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಆರಂಭಗೊಂಡಿರುವುದು ಸಂತಸದ ವಿಷಯ ಎಂದ ಸಚಿವೆ ಶೋಭಾ ಅವರು, ಈ ಕಾರ್ಯಕ್ರಮದ ಮೂಲಕ ಜನರಿಗೆ ಕಡಿಮೆ ವೆಚ್ಚದಲ್ಲಿ ಔಷಧಿ ಸಿಗಬೇಕು ಎನ್ನುವುದು ಪ್ರಧಾನಿ ಮೋದಿ ಅವರ ಕಾಳಜಿ. ಮುಂದಿನ 1 ವರ್ಷದಲ್ಲಿ 25 ಸಾವಿರ ಜನೌಷಧಿ ಕೇಂದ್ರ ತೆರೆಯುವಂತಾಗಬೇಕು ಎನ್ನುವುದು ಕೇಂದ್ರದ ಆಶಯ. ಈ ವಿಷಯದಲ್ಲಿ ಕೇಂದ್ರ ಆರೋಗ್ಯ ಇಲಾಖೆಗೂ ಟಾರ್ಗೆಟ್ ನೀಡಲಾಗಿದೆ ಎಂದು ವಿವರಿಸಿದರು. ಇದೇ ವೇಳೆ ಕೇಂದ್ರ ಕಾರ್ಮಿಕ ಇಲಾಖೆ ಮೂಲಕ ಜಾರಿ ಮಾಡಿರುವ ಹೊಸ ಕಾರ್ಮಿಕ ಸಂಹಿತೆಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಒತ್ತಾಯಿಸಿದರು.

ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸೊಸೈಟಿ ಅಧ್ಯಕ್ಷ ರಾಘವೇಂದ್ರ ನಾಯಕ್, ಉಪಾಧ್ಯಕ್ಷ ರಾಜು ಸಾಲ್ಯಾನ್, ಅರಸಿನಮಕ್ಕಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ,ಸೊಸೈಟಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಚಂದ್ರ ರಾವ್, ಹಾಗೂ ಊರಿನ ಗಣ್ಯರು, ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿ ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here