








ಶಿಶಿಲ: ಗ್ರಾಮದ ಬಹುದಿನದ ಬೇಡಿಕೆಯಾಗಿದ್ದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ 2 ಕೋಟಿ 75 ಲಕ್ಷ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕೋಪಯೋಗಿ ಇಲಾಖೆ ಮುಖಾಂತರ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.









