








ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಡಿ.ಎಡ್. ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಾದ ರಂಜಿನಿ ಬಿ., ಸಾತ್ವಿಕ್ ಪಿ. ಎಸ್. ಹಾಗೂ ತನುಶ್ರೀ ಕೆ. 2025 ರ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಪ್ರಕಟಣೆಯಲ್ಲಿ ತಿಳಿಸಿದ್ದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.









