ಮುಂಡೂರು: ಶ್ರೀ ಗುರು ನಾರಾಯಣ ಸ್ವಾಮಿ ಸಂಘದಿಂದ ಗುರು ಪೂಜೆ, ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ

0

ಮುಂಡೂರು: ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಗ್ರಾಮ ಸಮಿತಿಯ ಆಶ್ರಯದಲ್ಲಿ ಗುರು ಪೂಜೆ, ಸತ್ಯನಾರಾಯಣ ಪೂಜೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಡಿ. 28ರಂದು ಮುಂಡೂರು ಶ್ರೀ ಶಾರದಾಂಬ ಯುವಕ ಮಂಡಲದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಮಾತನಾಡಿ ತಾಲೂಕು ಮಾತೃ ಸಂಘದ ಆಶ್ರಯದಲ್ಲಿ ಇರುವಂತಹ ಗ್ರಾಮ ಸಮಿತಿಯ ಸಂಘಗಳಲ್ಲಿ ಮುಂಡೂರು ಬಿಲ್ಲವ ಸಂಘವು ಒಂದು ಉತ್ತಮ ಸಂಘವಾಗಿದ್ದು, ಪ್ರಾರಂಭದಿಂದಲೂ ಗ್ರಾಮದಲ್ಲಿರುವ ಸಮುದಾಯದ ಎಲ್ಲಾ ಮನೆಗಳನ್ನು ಸಂಪರ್ಕದಲ್ಲಿ ಇರಿಸಿಕೊಂಡು ವರ್ಷದಲ್ಲಿ ಹಲವು ಕಾರ್ಯಕ್ರಮಗಳನ್ನ ಮಾಡಿಕೊಂಡು ಕಲಿಯುವ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ , ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ,ಅನಾರೋಗ್ಯದಿಂದ ಬಳಲುತ್ತಿದ್ದವರಿಗೆ ಚಿಕಿತ್ಸೆ ವೆಚ್ಚ, ಮನೋರಂಜನೆಗಾಗಿ ಆಟೋಟ ಸ್ಪರ್ಧೆಗಳು, ಪ್ರವಾಸ ಇನ್ನಿತರ ಕಾರ್ಯಕ್ರಮಗಳನ್ನ ಹಾಕಿಕೊಂಡು ಒಂದು ಉತ್ತಮ ಸಂಘವಾಗಿ ಬೆಳೆಯುತ್ತಿದೆ ಎಂದರು.

ಸಂಘದ ಮಾಜಿ ಅಧ್ಯಕ್ಷ ರಾಜೀವ ಸಾಲಿಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸಂಘವು ಆರಂಭವಾಗಿ 29 ವರ್ಷಗಳಲ್ಲಿ ಸಂಘವು ಮಾಡಿದ ಕಾರ್ಯ ಚಟುವಟಿಕೆಗಳು ಹಾಗೂ ಸಂಘವು ಬೆಳೆದು ಬಂದ ರೀತಿಯನ್ನು ವಿವರಿಸಿದರು. ಶಿಕ್ಷಣ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು. ಅವರಿಗೆ ಸಂಘದ ಅಧ್ಯಕ್ಷ ವಸಂತ ಪೂಜಾರಿ ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ತಾಲೂಕು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ.ಕೆ. ಪ್ರಸಾದ್, ಯುವ ವಾಹಿನಿಯ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಗುರುವಪ್ಪ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶ್ವೇತಾ ಹರೀಶ್, ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಮಾನಂದ ಸಾಲಿಯಾನ್, ಪಂಚಾಯತ್ ಅಧ್ಯಕ್ಷೆ ಸವಿತಾ ವಿಶ್ವನಾಥ್, ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಹಾಗೂ ಸಂಘದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆದಿತ್ಯ ಜಯರಾಜ್ ಪ್ರಾರ್ಥಿಸಿ, ಸಂಘದ ಕಾರ್ಯದರ್ಶಿ ಜಯರಾಜ್ ಬಂಗೇರ ಸ್ವಾಗತಿಸಿದರು. ಸುಧಾಮಣಿ ರಮಾನಂದ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿ ಅಶೋಕ್ ಕೊಡಕ್ಕಾಲು ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here