






ಉಜಿರೆ :ಉಜಿರೆ ಶ್ರೀ ಧ. ಮಂ. ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಪ್ರೊ. ಎಸ್. ಪ್ರಭಾಕರ್ ಅವರಿಗೆ ನುಡಿ ನಮನ ಕಾರ್ಯಕ್ರಮ ಜ.1ರಂದು ಉಜಿರೆ ಶ್ರೀ ಸಿದ್ಧವನ ಗುರುಕುಲ ಉಜಿರೆಯಲ್ಲಿ ಜರುಗಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯಾವವರು ನುಡಿ ನಮನ ಸಲ್ಲಿಸಿ ಮಾತನಾಡಿ, ಸರ್ಕಾರಿ ಉದ್ಯೋಗದಲ್ಲಿ ಇದ್ದ ಪ್ರಭಾಕರ್ ಅವರು ಉಜಿರೆ ಕಾಲೇಜು ಆರಂಭಿಸುವಾಗ ಸ್ಥಾಪಕ ಪ್ರಾಚಾರ್ಯರಾಗಿ ಕಾಲೇಜಿನ ಬೆಳವಣಿಗೆಗೆ ಶ್ರಮಿಸಿದ್ದರು. ವಜ್ರ ಕುಮಾರ್ ಮತ್ತು ಪ್ರೊ. ಪ್ರಭಾಕರ್ ಯಾವುದೇ ಯೋಜನೆ ಆರಂಭಿಸಿದರೂ ಅದನ್ನು ಬೇಡ ಎಂದವರಲ್ಲ ಎಂದರು. ಧರ್ಮಸ್ಥಳ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ 2022ರವರೆಗೆ ಕಾರ್ಯದರ್ಶಿಯಾಗಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಿದರು. ಅವರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ಇತ್ತು. ಅವರು ಅತ್ಯಂತ ಶಿಸ್ತಿನ ವ್ಯಕ್ತಿ, ಆಹಾರದ ಬಗ್ಗೆ ಹೆಚ್ಚಿನ ಜಾಗೃತಿ ಹೊಂದಿದ್ದರು ಎಂದರು.



ಧರ್ಮಸ್ಥಳ ಡಾ. ಹೇಮಾವತಿ ವೀ.ಹೆಗ್ಗಡೆ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನ್ಯಾಯವಾದಿ ಬಿ.ಕೆ. ಧನಂಜಯ ರಾವ್ ಮಾತನಾಡಿ ನುಡಿ ನಮನ ಸಲ್ಲಿಸಿದರು. ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ಪರಿಷತ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರ ಶರತ್ ಕೃಷ್ಣ ಪಡುವೆಟ್ನಾಯ, ಸುಪ್ರೀಯ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್ ಪ್ರೊ. ಪ್ರಭಾಕರ್ ರವರ ಪುತ್ರಿ ಶರ್ಮಿಳಾ ಅಳಿಯ ನರೇಂದ್ರ ಉಪಸ್ಥಿತರಿದ್ದರು.
ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ನಾಗರೀಕರು ಹಾಜರಿದ್ದರು. ಎಸ್. ಡಿ. ಎಂ ಕಾಲೇಜಿನ ಉಪನ್ಯಾಸಕ ದಿವಾ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.









