ಏ. ೨೯: ಧರ್ಮಸ್ಥಳದಲ್ಲಿ ೫೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ

0

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ೨೦೨೬ರ ಏಪ್ರಿಲ್ ೨೯ರಂದು ಸಂಜೆ ಗಂಟೆ ೬.೪೦ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉzಶದಿಂದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ೧೯೭೨ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು ಹದಿಮೂರು ಸಾವಿರ ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ೨೦೨೬ರ ಏಪ್ರಿಲ್ ೨೫ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ ೦೮೨೫೬-೨೬೬೬೪೪, ವಾಟ್ಸಪ್ ನಂ. ೯೬೬೩೪೬೪೬೪೮, ೮೧೪೭೨೬೩೪೨೨ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here