






ಬಂದಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಜಿಲ್ಲಾ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಇವುಗಳ ಸಂಯುಕ್ತ ಆಶಯದಲ್ಲಿ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಡಿ. 29ರಂದು ನಡೆಯಿತು. ಬೈಪಾಡಿ ಒಕ್ಕೂಟದ ಕಾರ್ಯದರ್ಶಿ ಗೀತಾ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಡಿ.ಎ. ರೆಹಮಾನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಸ್ವಾಸ್ಥ್ಯ ಸಂಕಲ್ಪದ ಬಗ್ಗೆ ಮಾತನಾಡುತ್ತಾ ತಂದೆ ತಾಯಿಯರನ್ನು ಗೌರವಿಸುವುದು, ಮುಂದಿನ ಜೀವನದಲ್ಲಿ ಯಾವುದೇ ದುಶ್ಚಟಗಳಿಗೆ ಒಳಗಾಗದೆ ಉತ್ತಮ ಸದೃಢ ಪ್ರಜೆಗಳಾಗಿ ಬಾಳಿ ಸಮಾಜವನ್ನು ಮಾದಕ ಮುಕ್ತ ಸಮಾಜವನ್ನಾಗಿಸಬೇಕೆಂದು ಮಕ್ಕಳಿಗೆ ಉತ್ತಮವಾಗಿ ಹಲವಾರು ಉದಾಹರಣೆಯ ಮೂಲಕ ಮನಮುಟ್ಟುವಂತೆ ವಿವರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೆ. ಮಕ್ಕಳು ದುಶ್ಚಟಗಳಿಂದ ದೂರ ಇರುವಂತೆ ತಿಳಿಸಿದರು. ಮತ್ತು ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞೆಯನ್ನು ಮಕ್ಕಳಿಗೆ ಬೋಧಿಸಿದರು. ಸೇವಾ ಪ್ರತಿನಿಧಿ ಪ್ರಮೀಳ ಸ್ವಾಗತಿಸಿ, ವಲಯ ಮೇಲ್ವಿಚಾರಕಿ ಪೂರ್ಣಿಮಾ ನಿರೂಪಿಸಿದರು. ಶಾಲೆಯ ಸಹ ಶಿಕ್ಷಕಿ ಮೇಧಾ ಧನ್ಯವಾದ ನೀಡಿದರು.









