








ಕಾಯರ್ತಡ್ಕ: ದಿವ್ಯ ಜ್ಯೋತಿ ಶಾಲೆಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಕ್ರಮ ಜ.3ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಮೂಲತಃ ಮೈಸೂರಿನವರಾದ ಪ್ರಸ್ತುತ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಶಿಕ್ಷಣ ಕಾಲೇಜಿನ ಪ್ರಾಧ್ಯಾಪಕ ಮಂಜು ಅವರು ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪೂರ್ವಸಿದ್ಧತೆಯ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಲಿಸ್ನಾ ಮ್ಯಾಥ್ಯೂ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.









