






ಬೆಳ್ತಂಗಡಿ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ಜ.6 ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದಾರೆ.
ಜನವರಿ 5 ರಂದು ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಲಿರುವ ಅವರು ಜನವರಿ 6 ರಂದು ಬೆಳಗ್ಗೆ 10 ಘಂಟೆಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಮಲೆಕುಡಿಯ ಸಮುದಾಯದ ಕಾಲೋನಿಗೆ ಭೇಟಿ ನೀಡಿ ಅಲ್ಲಿ ಜನರ ಕುಂದುಕೊರತೆಗಳನ್ನು ಆಲಿಸುತ್ತಾರೆ.


11 ಘಂಟೆಗೆ ಬೆಳ್ತಂಗಡಿ ನಗರದ ಮಂಜುನಾಥ ಕಲಾ ಭವನದ ಪಿನಾಕಿ ಸಭಾಂಗಣದಲ್ಲಿ ಪ.ಜಾತಿ/ಪಂಗಡಗಳ ಅಲೆಮಾರಿ ಬೈರ, ನಲಿಕೆ, ಪಂಬದ, ಮಲೆಕುಡಿಯ ಸಮುದಾಯಗಳ ಜನಸ್ಪಂದನ ಮತ್ತು ಕುಂದುಕೊರತೆಗಳ ಬಗ್ಗೆ ಸಭೆ ನಡೆಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ತಾಲೂಕಿನ ಬೈರ, ನಲಿಕೆ, ಪಂಬದ, ಮಲೆಕುಡಿಯ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









