






ಬೆಳ್ತಂಗಡಿ: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರವರ ಹುಟ್ಟುಹಬ್ಬದ ಪ್ರಯುಕ್ತ ದಿ. ವಸಂತ ಬಂಗೇರ ಅವರ ಅಭಿಮಾನಿ ಸಮಿತಿಯಿಂದ ನಡೆಯಲಿರುವ 8ನೇ ವರ್ಷದ ರಕ್ತದಾನ ಶಿಬಿರದ ಸಮಾಲೋಚನಾ ಸಭೆಯನ್ನು ಜ.5ರಂದು ಅಪರಾಹ್ನ 3 ಗಂಟೆಗೆ ಬೆಳ್ತಂಗಡಿಯ ಗುರುನಾರಾಯಣ ಸ್ವಾಮಿ ಸಭಾ ಭವನದಲ್ಲಿ ಆಯೋಜಿಸಲಾಗಿದೆ.


ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲು ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಮಾಹಿಲ್ತೋಡಿ ಹಾಗೂ ಪ್ರಧಾನ ಕಾರ್ಯದರ್ಶಿ ಮನೋಹರ್ ಕುಮಾರ್ ಎ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









