19ರ ವಯೋಮಾನದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ರಾಜ್ಯ ತಂಡ ಸಜ್ಜು

0

ಉಜಿರೆ: ಹರಿಯಾಣ ರಾಜ್ಯದ ರಾಣಿ ಪತ್ ನಲ್ಲಿ ನಡೆಯಲಿರುವ ಎಸ್‌ಜಿಎಫ್‌ಐ (SGFI) ವಯೋಮಿತಿ–19 ಬಾಲಕರ ವಿಭಾಗದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕರ್ನಾಟಕ ರಾಜ್ಯ ತಂಡ ಸಜ್ಜಾಗುತ್ತಿದೆ. ಈ ಬಾರಿ ಕರ್ನಾಟಕ ರಾಜ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ತಂಡ ಪ್ರತಿನಿಧಿಸುತ್ತಿದೆ. ಈ ತಂಡದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳು ಭಾಗವಹಿಸಿದ್ದು, ತಂಡದ ಪೂರ್ವಾಭ್ಯಾಸ ಶಿಬಿರವು ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಒಟ್ಟು 12 ವಿದ್ಯಾರ್ಥಿಗಳನ್ನು ಒಳಗೊಂಡ ಈ ತಂಡವು ತೀವ್ರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ತಂಡದ ನಾಯಕತ್ವವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸತ್ಯ ವಹಿಸಿಕೊಂಡಿದ್ದು, ತಂಡದ ತರಬೇತಿಯನ್ನು ಅನುಭವಿ ತರಬೇತಿದಾರ ಕೃಷ್ಣಾನಂದರಾವ್ ಅವರು ನಡೆಸುತ್ತಿದ್ದಾರೆ. ಕಾರ್ಯದರ್ಶಿ ರಮೇಶ್ ಎಚ್., ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ್ ಬಿ. ಪೂಂಜ ಉಪಸ್ಥಿತರಿದ್ದು, ಆಟಗಾರರಿಗೆ ಪ್ರೋತ್ಸಾಹ ನೀಡಿದರು.

LEAVE A REPLY

Please enter your comment!
Please enter your name here