






ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಉಜಿರೆ ವಲಯದ ಉಜಿರೆ ಕಾರ್ಯ ಕ್ಷೇತ್ರದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಉಜಿರೆ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಾರಂತ್ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರು ಅಭಿವೃದ್ದಿ ಹೊಂದುತ್ತಿರುವುದು ಸಂತಸದ ಸಂಗತಿಯಾಗಿದೆ. ಮಹಿಳೆಯರು ನಾಲ್ಕುಗೋಡೆಯ ಮದ್ಯದಿಂದ ಹೊರಗೆ ಬಂದು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಮಾತೃಶ್ರೀ ಅಮ್ಮನವರ ಜ್ಞಾನವಿಕಾಸ ಕಾರ್ಯಕ್ರಮವು ಪ್ರೇರಣೆ ಎಂದಿಗೆ ಆತ್ಮಸ್ಥೈರ್ಯವನ್ನು ನೀಡಿದೆ ಎಲ್ಲರೂ ಇದರ ಪ್ರಯೋಜನವನ್ನು ಪಡೆಯಿರಿ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಶಾಂತ್ ಮಹಿಳೆಯರ ಹಕ್ಕು ಮತ್ತು ಕಾನೂನಿನ ಬಗ್ಗೆ ಹಾಗೂ ಇತ್ತೀಚಿನ ದಿನಗಳಲ್ಲಿ ನಡೆಯುವ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ತಾಲೂಕಿನ ಯೋಜನಾಧಿಕಾರಿ ಶlಯಶೋಧರ ಜ್ಞಾನವಿಕಾಸ ಕೇಂದ್ರದ ಹಿನ್ನೆಲೆ ಮತ್ತು ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಜನಜಾಗತಿ ವೇದಿಕೆಯ ತಾಲೂಕು ಸದಸ್ಯೆ ಪುಷ್ಪಾವತಿ, ಒಕ್ಕೂಟದ ಅಧ್ಯಕ್ಷೆ ಶೀಲಾವತಿ, ಮೇಲ್ವಿಚಾರಕಿ ಪೂರ್ಣಿಮಾ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯೆ ಲೀಲಾವತಿ ವಹಿಸಿದ್ದರು. ವಿನುತಾ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಸೌಮ್ಯ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್ ನಿರೂಪಿಸಿದರು.









