ಎಸ್.ಡಿ.ಎಂ ಕಾಲೇಜು ಉಜಿರೆ: ಜ. 9ರಂದು ರಾಷ್ಟ್ರೀಯ ವಿಚಾರ ಸಂಕಿರಣ

0

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯ ಹಿಂದಿ ವಿಭಾಗದ ವತಿಯಿಂದ ‘ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ’ ವಿಚಾರದ ಕುರಿತು ಇದೇ ಬರುವ ದಿನಾಂಕ ಜನವರಿ 09 ಶುಕ್ರವಾರ ದಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾರ್ಗದರ್ಶನದಲ್ಲಿ ನಡೆಯುವ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಸಭಾ ಕಾರ್ಯಕ್ರಮವು ಬೆಳಿಗ್ಗೆ 9:30 ರಿಂದ 11:00 ಗಂಟೆಯವರೆಗೆ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಷನ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಪ್ರೊ. ಶಶಿಶೇಖರ್ ಎನ್. ಕಾಕತ್ಕರ್ ಉದ್ಘಾಟಿಸಿವರು. ಅಭ್ಯಾಗತರಾಗಿ ಪಾಂಡಿಚೇರಿ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಸಿ. ಜಯಶಂಕರ್ ಬಾಬು, ಮುಖ್ಯ ಅತಿಥಿಗಳಾಗಿ ಗುಜರಾತ್ ನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದ ಸ್ನಾತಕೋತ್ತರ ಹಿಂದಿ ವಿಭಾಗದ ಮುಖ್ಯಸ್ಥ ಪ್ರೊ. ದಿಲೀಪ್ ಮೆಹ್ರಾ, ವಿಶೇಷ ಆಹ್ವಾನಿತರಾಗಿ ಚೆನೈ ನ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು, ಪರೀಕ್ಷಾ ನಿಯಂತ್ರಕ ಡಾ. ಸುಭಾಷ್ ಜಿ. ರಾಣೆ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಿ. ವಹಿಸಲಿದ್ದಾರೆ.

ವಿಚಾರ ಸಂಕಿರಣದ ಮೊದಲಾರ್ಧದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಭಕ್ತಿಕಾಲೀನ ಹಿಂದಿ ಸಾಹಿತ್ಯ ಕುರಿತು ಕೇರಳದ ಕಾಸರಗೋಡು ಕೇಂದ್ರ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ತಾರು ಎಸ್. ಪವಾರ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಸೋಲಾಪುರ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಸಂಶೋಧನಾ ನಿರ್ದೇಶಕ ಪ್ರೊ. ರವಿರಾಜ ಫುರಡೆ ‘ ಸಂತ ಕಬೀರರ ಸಾಹಿತ್ಯವು ಭಾರತೀಯ ಜನಜೀವನದ ಮೇಲೆ ಬೀರಿದ ಸಕಾರಾತ್ಮಕ ಪ್ರಭಾವ , ಮೂಡಬಿದ್ರೆಯ ಆಳ್ವಾಸ್ ಮಹಾವಿದ್ಯಾಲಯ ಹಿಂದಿ ವಿಭಾಗದ ಮುಖ್ಯಸ್ಥ ಡಾ. ದತ್ತಾತ್ರಯ ಹೆಗಡೆ ‘ವ್ಯಕ್ತಿತ್ವ ನಿರ್ಮಾಣದ ಮೂಲಗಳು – ಭಕ್ತಿಕಾವ್ಯ (ಕಬೀರರ ಪರಿಪ್ರೇಕ್ಷ್ಯದಲ್ಲಿ), ಸುಳ್ಳ್ಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥ ರಾಮಕೃಷ್ಣ ಕೆ. ಎಸ್. ‘ವೃಂದರ ದೋಹಾಗಳಲ್ಲಿ ಅಡಗಿರುವ ಜನಹಿತ ಹಾಗೂ ರಾಷ್ಟ್ರಹಿತದ ಭಾವನೆ – ಆಧುನಿಕ ಸಂದರ್ಭದಲ್ಲಿನ ಮಹತ್ವ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧಗಳ ಪ್ರಸ್ತುತಪಡಿಸಲಿದ್ದಾರೆ. ಇದರ ಅಧ್ಯಕ್ಷತೆಯನ್ನು ಧಾರವಾಡದ ಕಿಟೆಲ್ ಕಲಾ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕವಿತಾ ಚಂದಗುಡೆ ನಡೆಸಿಕೊಡಲಿದ್ದಾರೆ.

ಮಧ್ಯಾಹ್ನದ ಬಳಿಕ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥ ಪ್ರೊ. ನಾಮದೇವ್ ಗೌಡ ‘ದಕ್ಷಿಣ ಭಾರತದ ಭಕ್ತಿಕಾವ್ಯ’ ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನಾ ಸಿ. ‘ಕಬೀರ ಮತ್ತು ತುಕಾರಾಮರ ದಾರ್ಶನಿಕ ವಿಚಾರಗಳು’ , ಧಾರವಾಡ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಹಿಂದಿ ವಿಭಾಗದ ಮುಖ್ಯಸ್ಥ ಡಾ. ರಾಜಕುಮಾರ್ ನಾಯಕ್ ‘ಕನ್ನಡ ಶರಣ ಸಾಹಿತ್ಯ ಮತ್ತು ಹಿಂದಿ ಭಕ್ತಿಕಾವ್ಯ’ , ಮಹಾರಾಷ್ಟ್ರದ ಸಿಂಹಗಡ ಕ್ಯಾಂಪಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರಫೀಕ್ ಎನ್. ನದಾಫ್ ‘ ಆಧ್ಯಾತ್ಮಿಕ ಮತ್ತು ಧಾರ್ಮಿಕ ಶಿಕ್ಷಣದಲ್ಲಿ ಭಕ್ತಿಕಾವ್ಯದ ಪಾತ್ರ’ ಕುರಿತು ವಿಚಾರವನ್ನು ಮಂಡಿಸಲಿದ್ದಾರೆ.

ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಆಡಳಿತ ಕುಲಸಚಿವ ಪ್ರೊ. ಶ್ರೀಧರ ಎನ್. ಭಟ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಹರಿಹರದ ಎಸ್.ಜೆ.ವಿ.ಪಿ. ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ರಮೇಶ್ ಕೆ. ಪರ್ವತಿ, ಅತಿಥಿಗಳಾಗಿ ಮೈಸೂರಿನ ಸೇಂಟ್ ಫಿಲೋಮೆನಾ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ ಉಮೇಶ್ ಸೇರಿದಂತೆ ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿಲಿದ್ದಾರೆ.

ರಾಷ್ಟ್ರೀಯ ವಿಚಾರ ಸಂಕಿರಣದ ಪ್ರಧಾನ ಸಂಯೋಜಕ ಪ್ರಾಚಾರ್ಯರ ಪ್ರೊ. ವಿಶ್ವನಾಥ ಪಿ , ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ದ, ಡಾ. ಮಲ್ಲಿಕಾರ್ಜುನ ಎನ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here